ಮೈಸೂರು : ಬೆಳ್ಳಂಬೆಳಗ್ಗೆ ಸ್ಲೀಪರ್‌ ಬಸ್‌ – ಲಾರಿ ಡಿಕ್ಕಿ ;  ನಾಲ್ವರು ದುರ್ಮರಣ !

ಮೈಸೂರು, ಅ. 16 : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್‌ನಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ.

ಸ್ಲೀಪರ್‌ ಬಸ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಅಪಘಾತಕ್ಕೀಡಾದ ಬಸ್‌ ಮೈಸೂರಿನಿಂದ ಮಡಿಕೇರಿ ಕಡೆಗೆ ಹೊರಟಿತ್ತು, ಲಾರಿ ಮಡಿಕೇರಿ ಭಾಗದಿಂದ ಮೈಸೂರು ಕಡೆಗೆ ಬರುತ್ತಿತ್ತು. ಕೀರನಹಳ್ಳಿ ಗೇಟ್‌ ಬಳಿ ಅಪಘಾತಕ್ಕೀಡಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸುತ್ತಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !