ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್ – ಸಿಸಿಬಿ ಪೊಲೀಸರ ಕಾರ್ಯಾಚರಣೆ

ಬೆಂಗಳೂರು, ಫೆ. 20 : ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಶುಕ್ರವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 1.60 ಕೋಟಿ ರೂ. ಲಂಚ ಪಡೆಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಬಂಧನ ನಡೆದಿದೆ. ಗಂಭೀರ ಆರೋಪದ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿತ್ತು. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಬಂಧನಕ್ಕೊಳಪಡಿಸಿದ್ದಾರೆ.

Advertisement

ಬಂಧನದ ಬೆನ್ನಲ್ಲೇ ಮೈಸೂರಿನ ಗೌರಿ ಶಂಕರ ನಗರದಲ್ಲಿರುವ ಸ್ನೇಹಮಯಿ ಕೃಷ್ಣ ಅವರ ನಿವಾಸದಲ್ಲೂ ಸಿಸಿಬಿ ಪೊಲೀಸರ ತಂಡ ಶೋಧ ನಡೆಸಿರುವ ಬಗ್ಗೆ ವರದಿಯಾಗಿದೆ.
ಮುಡಾ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮುಡಾದ ಈ ಹಿಂದಿನ ಆಯುಕ್ತ ಡಿ.ಬಿ.ನಟೇಶ್ ತಮ್ಮ ಪರಿಚಯಸ್ಥರ ಮೂಲಕ 9 ಕೋ.ರೂ. ಹಣ ಸಾಗಾಟ ಮಾಡಿದ್ದು, ಈ ಪೈಕಿ 1.60 ಕೋಟಿ ರೂ. ಅನ್ನುಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಲಂಚದ ರೂಪದಲ್ಲಿ ನೀಡಿ ಮುಂಭಡ್ತಿ ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ದರು.

ಫೆ. 9ರಂದು ಕೋಟ್ಯಂತರ ರೂ. ಅನ್ನು ಕೆಎ-41 ಸಿ-6723 ಸಂಖ್ಯೆಯ ಇಟಿಯಾಸ್ ಕಾರಿನಲ್ಲಿ ಸಾಗಿಸಲಾಗಿದೆ. ಬೆಂಗಳೂರಿನಿಂದ ಸುಮಾರು 5 ಬ್ಯಾಗ್ ಗಳಲ್ಲಿ 9 ಕೋ. ರೂ. ಮಿಕ್ಕಿ ಮೈಸೂರಿಗೆ ತರಲಾಗಿದೆ. ಈ ಹಣ ಎಲ್ಲಿಂದ ಬಂದಿದೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲದಿದ್ದರೂ, ಅದು ಡಿ.ಬಿ.ನಟೇಶ್ ಅವರಿಗೆ ಸೇರಿದ್ದಾಗಿದೆ ಎಂಬ ಮಾಹಿತಿ ಇದೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ. ಈ ಐದು ಬ್ಯಾಗ್‌ಗಳಲ್ಲಿ ಒಟ್ಟು 9 ಕೋಟಿ ರೂ. ಗೂ ಹೆಚ್ಚಿದ್ದು, ಅದರಲ್ಲಿ ರೂ.1.60 ಕೋ. ರೂ. ಅನ್ನು ಶಾಲಿನಿ ರಜನೀಶ್ ಅವರ ಕಡೆಯವರಿಗೆ ನೀಡಲಾಗಿದೆ ಎಂಬ ಮಾಹಿತಿ ಇದೆ. ಈ ಕಾರಣದಿಂದಲೇ ನಟೇಶ್‌ಗೆ ಫೆ.13ರಂದು ಮುಂಭಡ್ತಿ ನೀಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಆರೋಪಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದರು. ಕರ್ನಾಟಕ ನಾಗರಿಕ ಸೇವಾ ನಿಯಮದಲ್ಲಿ ಪ್ರಸ್ತಾವಿಸಿರುವ ಯಾವುದೇ ಕಾರಣಗಳು ಕಂಡು ಬಾರದಿರುವುದರಿಂದ ನಟೇಶ್ ಅವರನ್ನು ಅಮಾನತು ಮಾಡಿಲ್ಲ. ಸರಕಾರಿ ನೌಕರರನ್ನು ಮುಂಭಡ್ತಿಗೆ ಪರಿಗಣಿಸಬೇಕಾದ ನಿಯಮಾ ವಳಿಗಳನ್ನು ಪಾಲಿಸಲಾಗಿದೆ. ಸರಕಾರದ ಆಸ್ತಿಯನ್ನು ಅಕ್ರಮವಾಗಿ, ಭ್ರಷ್ಟಾಚಾರ ಮೂಲಕ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಕಾನೂನು ಮತ್ತು ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಇದೇ ವೇಳೆ ಸಮರ್ಥಿಸಿಕೊಂಡಿದ್ದರು. ನಟೇಶ್‌ಗೆ ಮುಂಭಡ್ತಿ ನೀಡಿರುವುದನ್ನು ಆಕ್ಷೇಪಿಸಿ ಕೆಲವು ಅಂಶಗಳಿಗೆ ಸ್ಪಷ್ಟಿಕರಣ ನೀಡುವಂತೆ ಸ್ನೇಹಮಯಿ ಕೃಷ್ಣ ಬರೆದಿದ್ದ ಪತ್ರಕ್ಕೆ ನೀಡಿರುವ ಉತ್ತರದಲ್ಲಿ ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಮುಖ್ಯ ಕಾರ್ಯದರ್ಶಿಗಳು ಅಲ್ಲಗಳೆದಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.