ಮುಂಡಾಜೆ, ಜು. 14 : ಗ್ರಾಮದ ಸೋಮಂತಡ್ಕ ಎಂಬಲ್ಲಿ ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆಂದು ತಿಳಿದು ಬಂದಿದ್ದು, ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡ ರಿಕ್ಷಾ ಚಾಲಕರನ್ನು ಸಂಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ಅಪಘಾತದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.



