ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ನಿಯಮ ಘೋಷಿಸಿದ ಪ್ರಧಾನಿ – 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್

Advertisement

ನವದೆಹಲಿ, 24 : ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸೋನಂ ವಾಂಗ್ಚುಕ್ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ.

Advertisement

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆಪಿ ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದರು.

Advertisement

ಸರ್ಕಾರದೊಂದಿಗೆ ಸುದೀರ್ಘ ಮಾತುಕತೆಯ ಬಳಿಕ ಹಾಗೂ ದೇಶದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯನ್ನು ಮನಗಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಸೋನಂ ವಾಂಗ್ಚುಕ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸೋನಂ ವಾಂಗ್ಚುಕ್, ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರು. ಎಲ್ಲರೂ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶ ನೀಡದಂತೆ ಜಾಗರೂಕರಾಗಿರಬೇಕು ಎಂದು ಕರೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಉಪವಾಸ ಅಂತ್ಯಗೊಳಿಸಿದ ಬಳಿಕ ಸೋನಂ ವಾಂಗ್ಚುಕ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ವೈದ್ಯರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳಬೇಕು ಮತ್ತು ಶೀಘ್ರವೇ ತೂಕವನ್ನು ಮರಳಿ ಪಡೆಯಬೇಕು ಎಂದು ಅವರು ಸಂದೇಶ ನೀಡಿದ್ದಾರೆ.

ದೇಶದಲ್ಲಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ನಿಯಮಗಳನ್ನು ಒಳಗೊಂಡ ಹೊಸ ಮಸೂದೆ ತರಲಾಗುವುದು ಎಂದು ಪ್ರಧಾನಿ ಮೋದಿ ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಘೋಷಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ