ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

The Chairperson, National Advisory Council, Smt. Sonia Gandhi with the King of Bhutan, His Majesty Jigme Khesar Namgyel Wangchuck and the Bhutan Queen, Her Majesty Jetsun Pema Wangchuck, in New Delhi on January 07, 2014.

ಹೊಸದಿಲ್ಲಿ, ಜ. 06 : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸೋನಿಯಾ ಗಾಂಧಿ ಅವರಿಗೆ ದೀರ್ಘ ಕಾಲದಿಂದ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯದ ಸ್ಥಿತಿ ಉತ್ತಮವಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಅವರನ್ನು ಎದೆರೋಗ ತಜ್ಞರ ನಿಗಾದಲ್ಲಿ ಇರಿಸಲಾಗಿದೆ ಎನ್ನಲಾಗುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರಿಗೆ ದೀರ್ಘಕಾಲದ ಕೆಮ್ಮಿನ ಸಮಸ್ಯೆ ಇದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ಕೆಮ್ಮಿನ ತೊಂದರೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಅವರು ನಿಯಮಿತವಾಗಿ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬರುತ್ತಿರುತ್ತಾರೆ ಎನ್ನಲಾಗಿದೆ.

ಕಳೆದ ಡಿಸೆಂಬರ್ 2025ರಲ್ಲಿ ಅವರು 79ನೇ ವರ್ಷಕ್ಕೆ ಕಾಲಿಟ್ಟಿದ್ದರು. ವಯೋಸಹಜ ಕಾಯಿಲೆ ಮತ್ತು ದೆಹಲಿಯಲ್ಲಿನ ವಾಯುಮಾಲಿನ್ಯದಿಂದಾಗಿ ಉಸಿರಾಟದ ಕಿರಿಕಿರಿ ತಪ್ಪಿಸಲು ವೈದ್ಯಕೀಯ ತಂಡ ನಿಗಾ ವಹಿಸಿದೆ. ಸದ್ಯ ಆತಂಕಪಡುವಂತದ್ದೇನಿಲ್ಲ. ಅವರು ನಿತ್ಯ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.