ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಸಿಬಿಐಗೆ ನೋಟೀಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್

ಬೆಳ್ತಂಗಡಿ, ಮಾ. 23 : ಧರ್ಮಸ್ಥಳ ಗ್ರಾಮದ ಮಣ್ಯಸಂಕದಲ್ಲಿ ೧೩ ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾ.೨೩ರಂದು ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ. 2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯ ಅವರ ಮೃತದೇಹ ಮರುದಿನ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಸಿಐಡಿ ತನಿಖೆ ನಡೆದು ಬಳಿಕ ಸಿಬಿಐ ತನಿಖೆ ನಡೆದಿತ್ತು. ಕಾರ್ಕಳದ ಸಂತೋಷ್ ರಾವ್ ಎಂಬಾತನನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದಡಿ ಬಂಧಿಸಲಾಗಿತ್ತು.

Advertisement

ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಸಂತೋಷ್ ರಾವ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿತ್ತು. ಈ ವೇಳೆ ಸಿಬಿಐ ನ್ಯಾಯಾಲಯಕ್ಕೆ ಸೌಜನ್ಯ ಪ್ರಕರಣ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ತೋರಿಸಿತ್ತು. ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕುಸುಮಾವತಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ ಪ್ರಕರಣದ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ನೋಟೀಸ್ ಜಾರಿಗೊಳಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.