ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ !

ಬೆಂಗಳೂರು, ಏ. 23 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದುಕೊಂಡಿದೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ.

Advertisement

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಬಾರಿ ಪರೀಕ್ಷೆ ಬರೆದ ಶೇಕಡಾ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 5 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದರು. 7.7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸ್‌ಆ್ಯಪ್‌/ಎಸ್‌ಎಂಎಸ್‌ ಮೂಲಕವೂ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗಿದೆ. ಜತೆಗೆ ಫಲಿತಾಂಶ ಪಟ್ಟಿಯು ಶಾಲೆಗಳಲ್ಲಿ ಮಧ್ಯಾಹ್ನ 12 ಗಂಟೆಗೆ ಲಭ್ಯವಾಗಿದೆ. ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ ಮೂಲಕ ನೀಡಲಾಗಿದೆ. ಅಲ್ಲಿಯೇ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಟಾಪ್‌ 5 ಜಿಲ್ಲೆಗಳು
ದಕ್ಷಿಣ ಕನ್ನಡ – ಶೇ 98.4
ಉಡುಪಿ – ಶೇ 98.18
ಉತ್ತರ ಕನ್ನಡ – ಶೇ 98.02
ಹಾಸನ – ಶೇ 97.51
ಮಂಡ್ಯ – ಶೇ 97.4

ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ

ಈ ಬಾರಿ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ದಾವಣಗೆರೆಯ ಭರತ್‌, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರ ಧನುಷ್‌ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಅಧಿಕೃತ ವೆಬ್‌ಸೈಟ್ ಯಾವುದು?
https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.