ಮಂಗಳೂರು : ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ – ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರತಿಭಟನೆ, ಎಬಿವಿಪಿ ಸಾಥ್

ಮಂಗಳೂರು, ಅ. 12 : ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.

ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನೇ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಲೇಜಿನ ನಡೆಯನ್ನು ಖಂಡಿಸಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಸಾಥ್ ನೀಡಿದೆ.

ಕಾಲೇಜು ಆಡಳಿತ ಮಂಡಳಿಯ ಈ ಕ್ರಮದಿಂದಾಗಿ ದಸರಾ ಆಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿರುವ ನೂರಾರು ವಿದ್ಯಾರ್ಥಿಗಳು, ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜು ಮುಂಭಾಗ ಧರಣಿ ಕುಳಿತಿದ್ದಾರೆ.

ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಲಾಗಿತ್ತು. ಆದರೂ ವಿದ್ಯಾರ್ಥಿಗಳ ಹಿತಾಸಕ್ತಿ ಕಡೆಗಣಿಸಿ, ಯಾವುದೇ ಸ್ಪಂದನೆ ನೀಡದೆ ಉದ್ದಟತನ ಪ್ರದರ್ಶಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ದಸರಾ ಹಬ್ಬದ ವೇಳೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು ಹಾಗೂ ಪರೀಕ್ಷೆಗಳನ್ನು ತಕ್ಷಣವೇ ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ನೀಡಿವೆ. ಸದ್ಯ ಕಾಲೇಜು ಗೇಟ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !