ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಳ್ಳರ ಕೈಚಳ – ನಿರ್ಗಮನದ ವೇಳೆ 20ಕ್ಕೂ ಹೆಚ್ಚು ಮೊಬೈಲ್‌, ಪರ್ಸ್ ಕಳವು

ಬೆಂಗಳೂರು, ಮಾ. 30 : ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ತಂಡಗಳ ನಡುವೆ ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿದ್ದು, 20ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಕಳವು ಮಾಡಿದ್ದಾರೆ. ಈ ಸಂಬಂಧ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ.

Advertisement

ಆರೋಪಿಗಳು ಜನಸಂದಣಿಯಲ್ಲಿ ಕ್ರಿಕೆಟ್ ಪ್ರೇಮಿಗಳ ಮೊಬೈಲ್‌ಗಳ ಕಳ್ಳತನ ಹಾಗೂ ಪರ್ಸ್‌ಗಳನ್ನು ಎಗರಿಸಿದ್ದಾರೆ. ಪಂದ್ಯ ಮುಗಿದ ಬಳಿಕ ಹೊರಗಡೆ ಬರುವಾಗ ಕಳ್ಳತನ ಮಾಡಲಾಗಿದೆ. ಮೊಬೈಲ್ ಕಳೆದುಕೊಂಡ ಕೆಲವರು ಖುದ್ದಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮತ್ತೆ ಕೆಲವರು ಇ-ಲಾಸ್ಟ್ ಮೂಲಕ ದೂರು ಸಲ್ಲಿಸಿದ್ದಾರೆ.

ಗೇಟ್ ನಂ 1, 2 ಮತ್ತು 3 ರಲ್ಲಿ ಅತಿ ಹೆಚ್ಚು ಕಳ್ಳತನವಾಗಿದೆ. ಠಾಣೆಯಲ್ಲಿ 8 ಮಂದಿ ದೂರು ಸಲ್ಲಿಸಿದ್ದು, ಇ-ಲಾಸ್ಟ್‌ನಲ್ಲಿ 12 ಕ್ಕೂ ಹೆಚ್ಚು ದೂರು ಸಲ್ಲಿಕೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೊಲೀಸರ ಭದ್ರತೆಗೆ ಶಹಬ್ಬಾಸ್‌ ಗಿರಿ:

ಮತ್ತೊಂದೆಡೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದ ವೇಳೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದ ನಗರ ಪೊಲೀಸರು ಉತ್ತಮ ಭದ್ರತೆ ಹಾಗೂ ಸುಗಮ ಸಂಚಾರಕ್ಕೆ ಅವಕಾಶ ನೀಡಿರುವ ಕುರಿತು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.