ಬಳ್ಳಾರಿ : 9ನೇ ತರಗತಿ ವಿದ್ಯಾರ್ಥಿಯಿಂದ ಕಬ್ಬಿಣದ ರಾಡ್ ನಿಂದ ದಾಳಿ – ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನ ಗಂಭೀರ !

ಬಳ್ಳಾರಿ : ಒಂಭತ್ತನೇ ತರಗತಿ ವಿದ್ಯಾರ್ಥಿಯೋರ್ವ ಕಬ್ಬಿಣದ ರಾಡ್ ನಿಂದ ದಾಳಿ ನಡೆಸಿ ಓರ್ವ ಸಹಪಾಠಿ ವಿದ್ಯಾರ್ಥಿಯನ್ನು ಕೊಲೆಗೈದ ಆಘಾತಕಾರಿ ಘಟನೆ ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ‘ಗುರುಕುಲ ಕಾನ್ಸೆಪ್ಟ್ ಸ್ಕೂಲ್’ ಎಂಬ ಸಿಬಿಎಸ್‌ ಇ ಶಾಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

Advertisement

ಈ ವೇಳೆ ಆರೋಪಿ ವಿದ್ಯಾರ್ಥಿ ನಡೆಸಿದ ಮಾರಣಾಂತಿಕ ದಾಳಿಯಿಂದ ವಾರ್ಡನ್ ಸೇರಿದಂತೆ ಇತರ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಗುರುಕುಲ ಕಾನ್ಸೆಪ್ಟ್ ಸ್ಕೂಲ್ ನಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಒಂಭತ್ತನೇ ತರಗತಿಯ ವಿದ್ಯಾರ್ಥಿಯೋರ್ವ, ಕಬ್ಬಿಣದ ರಾಡ್ ನಿಂದ ತನ್ನ ಸಹಪಾಠಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ದಾಳಿಯ ತೀವ್ರತೆಗೆ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಲಾಟೆ ಬಿಡಿಸಲು ಬಂದ ಮಹಿಳಾ ವಾರ್ಡನ್ ಮೇಲೂ ಬಾಲಕ ದಾಳಿ ನಡೆಸಿದ್ದಾನೆ.

ದಾಳಿ ನಡೆಸಿದ ಬಳಿಕ ಆರೋಪಿ ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ಏಳು ವಿದ್ಯಾರ್ಥಿಗಳು, ವಾರ್ಡನ್ ಅವರನ್ನು ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳೆಲ್ಲ 9ನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.