ಕೊಕ್ಕಡ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಾಲೇಜಿಗೆ ತೆರಳಲು ಸಿದ್ಧಳಾಗುತ್ತಿದ್ದವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಕೊಕ್ಕಡ, ಜೂ. 16 : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

Advertisement

ಮೃತರನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ(18) ಎಂದು ಗುರುತಿಸಲಾಗಿದೆ. ಕಳೆದ ಸುಮಾರು ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಮಾಹಿತಿಯ ಪ್ರಕಾರ, ಶ್ವೇತಾ ಎಂದಿನಂತೆ ಬೆಳಗ್ಗೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಘಟನೆ ನಡೆದ ವೇಳೆ ತಂದೆ ಕೆಲಸದ ನಿಮಿತ್ತ ಹೊರಗೆ ತೆರಳಿದ್ದು, ತಾಯಿ ಮಾತ್ರ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಈ ಮಧ್ಯೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ವೇತಾ ಪತ್ತೆಯಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.