ಉಡುಪಿ: ಓದುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Advertisement

ಉಡುಪಿ, ಡಿ. 30 : ಓದುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟುವಿನಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಸಮನ್ವಿ ಎಂದು ಗುರುತಿಸಲಾಗಿದೆ.

Advertisement

ಡಿಸೆಂಬರ್ 26ರ ಸಂಜೆ ಸಮನ್ವಿ ಅವರು ಓದಿನ ಬದಲು ಮೊಬೈಲ್ ಫೋನ್ ಬಳಸುತ್ತಿರುವುದನ್ನು ಗಮನಿಸಿದ ಅವರ ತಾಯಿ, ಮುಂಬರುವ ಪರೀಕ್ಷೆಗಳಿಗೆ ಸಿದ್ಧರಾಗುವಂತೆ ತಿಳಿ ಹೇಳಿದ್ದರು. ಮಗಳ ಭವಿಷ್ಯದ ದೃಷ್ಟಿಯಿಂದ ತಾಯಿ ಪ್ರೀತಿಯಿಂದಲೇ ಬುದ್ಧಿಮಾತು ಹೇಳಿದ್ದರು. ಆದರೆ, ತಾಯಿಯ ಮಾತಿನಿಂದ ಮನನೊಂದ ಸಮನ್ವಿ, ತನ್ನ ಮನೆಯ ಬೆಡ್ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ತಕ್ಷಣವೇ ಗಮನಿಸಿದ ಕುಟುಂಬಸ್ಥರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮನ್ವಿ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Advertisement

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಯಾವುದೇ ಸಮಸ್ಯೆಗಳಿದ್ದರೂ ತಾಳ್ಮೆಯಿಂದಿದ್ದರೆ ಆ ಸಮಸ್ಯೆಯನ್ನು ಪರಿಹರಿಸಿಕೊಂಡು, ಜೀವನ ನಡೆಸಬಹುದು. ಅನಿವಾರ್ಯತೆ ಇದ್ದಲ್ಲಿ ನಿಮ್ಮ ಮನೆ ಮಂದಿ ಅಥವಾ ಸ್ನೇಹಿತರ ಜೊತೆಗೆ ಚರ್ಚಿಸಿ, ಸಲಹೆಗಳನ್ನು ಪಡೆದುಕೊಳ್ಳಿ ಅಥವಾ ಸೂಕ್ತ ಸಂದರ್ಭಗಳಲ್ಲಿ ತಜ್ಞರ ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ