ಸುಬ್ರಹ್ಮಣ್ಯ : ಅಪ್ರಾಪ್ತ ವಯಸ್ಸಿನ ಬಾಲಕನೋರ್ವನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋವೊಂದು ಮೊಬೈಲ್ ನಲ್ಲಿ ವೈರಲ್ ಆಗುತ್ತಿದ್ದು, ಅದರ ಬೆನ್ನಲ್ಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಚೇತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು ಬಾಲಕನಿಗೆ, ದಿನಾಂಕ ನವೆಂಬರ್ 24ರಂದು ಆರೋಪಿ ಚೇತನ್ ಎಂಬವರು ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗಿರುವುದು ಬಾಲಕನ ತಾಯಿಯ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಬಾಲಕನ ತಾಯಿ ದೂರು ನೀಡಿದ್ದರು. ಸದ್ಯ ಆರೋಪಿತ ಚೇತನ್ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

