ಬಂದಾರು : 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ – ಕಾರಣ ನಿಗೂಢ !

Advertisement

ಬೆಳ್ತಂಗಡಿ, ಆ. 30 : 9ನೇ ತರಗತಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ಎಂಬಲ್ಲಿ ನಡೆದಿದೆ.

ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಬಾಲಕ ಬೆಳ್ತಂಗಡಿ ನಗರದ ಹಳೆಕೋಟೆಯಲ್ಲಿರುವ ವಾಣಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದು. ಆ.29 ರಂದು ಶಾಲೆಯಲ್ಲಿ ಪೋಷಕರ ಸಭೆ ವೇಳೆ ಕಡಿಮೆ ಮಾರ್ಕ್ ವಿಚಾರದಲ್ಲಿ ಶಿಕ್ಷಕರು ಪೋಷಕರಿಗೆ ತಿಳಿಸಿದ್ದರಿಂದ ನೊಂದುಕೊಂಡಿದ್ದ ಬಳಿಕ, ಸಂಜೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಕ ಆ.30 ರಂದು ಮನೆಯ ಮೇಲ್ಚಾವಣಿಯ ಕೋಣೆಯಲ್ಲಿ ವೇಲ್ ನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ-ತಾಯಿ ಮತ್ತು ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ.ಧರ್ಮಸ್ಥಳ ಪೋಲಿಸ್ ಠಾಣೆಯ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ