ಮಂಗಳೂರು : ತಿಂಗಳ ಹಿಂದೆ ತಂಗಿ ಆತ್ಮಹತ್ಯೆ – ಗಲ್ಫ್ ನಿಂದ ಬಂದ ಸಹೋದರ ಲಾಡ್ಜ್ ನಲ್ಲಿ ಶವವಾಗಿ ಪತ್ತೆ !

Advertisement

ಮಂಗಳೂರು, ಆ. 11 : ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Advertisement

ಕೇರಳದ ಬೇಕಲ್‌ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ದುರ್ದೈವಿ. ಕಳೆದ ಜೂನ್ ತಿಂಗಳಿನಲ್ಲಿ ಪಾಲಾದ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಅರ್ಜುನ್ ಅವರ ತಂಗಿ ಐಜಾ ಆರ್. ಮಹೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲದ ಬಳಿಕ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ, ತೀವ್ರ ಮಾನಸಿಕ ಒತ್ತಡದಿಂದ ಈ ಹಂತಕ್ಕೆ ತಲುಪಿದ್ದರು ಎನ್ನಲಾಗಿತ್ತು.

Advertisement

ತಂಗಿಯ ಮರಣದ ಸುದ್ದಿ ತಿಳಿದು ಗಲ್ಫ್‌ನಿಂದ ಮನೆಗೆ ಬಂದಿದ್ದ ಅರ್ಜುನ್, ಬಳಿಕ ಮತ್ತೆ ಉದ್ಯೋಗಕ್ಕೆ ತೆರಳಿದ್ದರು. ಭಾನುವಾರ ಗಲ್ಫ್‌ನಿಂದ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಅರ್ಜುನ್, ಮನೆಗೆ ವಾಪಸಾಗುತ್ತಿರುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಭಾನುವಾರ ಮಧ್ಯಾಹ್ನ ತಾಯಿಗೂ ಕರೆ ಮಾಡಿದ್ದರೂ ಮನೆಗೆ ಬರುವ ವಿಚಾರ ತಿಳಿಸಿರಲಿಲ್ಲ. ನಂತರ ಸ್ನೇಹಿತರು ಕುಟುಂಬಕ್ಕೆ ಮಾಹಿತಿ ನೀಡಿದಾಗ, ಕುಟುಂಬಸ್ಥರು ಅರ್ಜುನ್ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ ಫೋನ್ ಸ್ವಿಚ್ ಆಫ್ ಆಗಿದೆ. ಆತಂಕಗೊಂಡ ಕುಟುಂಬಸ್ಥರು ಮಂಗಳೂರಿಗೆ ಆಗಮಿಸಿ ಹುಡುಕಾಟ ನಡೆಸಿದ್ದರಾದರೂ ಆತ ಪತ್ತೆಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರಿನಲ್ಲಿರುವ ಲಾಡ್ಜ್ ಕೋಣೆಯೊಂದರಲ್ಲಿ ಅರ್ಜುನ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸುದ್ದಿ ತಿಳಿದುಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್​ ಪತ್ತೆಯಾಗಿಲ್ಲ. ಆದರೆ, ಸಣ್ಣ ಚೀಟಿಯೊಂದರಲ್ಲಿ “ಅಮ್ಮಾ, ಐ ಆಮ್ ಸಾರಿ” (Amma, I’m sorry) ಎಂದು ಬರೆದು, ತಮ್ಮ ಇಬ್ಬರು ಆಪ್ತ ಸ್ನೇಹಿತರಿಗೆ ಮಾಹಿತಿ ನೀಡುವಂತೆ ನಮೂದಿಸಿದ್ದಾರೆ ಎಂದು‌ ಕಮಿಷನರ್ ರೆಡ್ಡಿ ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಬಜ್ಪೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ