ಬೆಂಗಳೂರು : “ಅಪ್ಪ, ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ. ನೀವು ಕೊಟ್ಟ ಪ್ರೀತಿ ಯಾರಿಂದಲೂ ಸಿಗುವುದಿಲ್ಲ”-ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Advertisement

ಬೆಂಗಳೂರು : ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಡೆತ್ ನೋತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಸರುಘಟ್ಟ ರಸ್ತೆ ಸಮೀಪದ ಸೋಲದೇವನಹಳ್ಳಿ ಪ್ರದೇಶದಲ್ಲಿ ನಡೆದಿದೆ. ಹಾಸನ ಮೂಲದ ವತ್ಸಲಾ (19) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

Advertisement

ಬಿ.ಫಾರ್ಮ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ವತ್ಸಲಾ, ಬೆಂಗಳೂರಿನ ಪಿಜಿ ವಸತಿಗೃಹದಲ್ಲಿ ವಾಸಿಸುತ್ತಾ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ ತನ್ನ ಕೊಠಡಿಯಲ್ಲಿ ಎಂಟು ಪುಟಗಳ ಡೆತ್ ನೋಟ್ ಬರೆದ ಬಳಿಕ, ಮಧ್ಯಾಹ್ನ ಸುಮಾರು 2.30ರ ವೇಳೆ ಆತ್ಮಹತ್ಯೆಗೆ ಶರಣಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡೆತ್‌ ನೋಟ್‌ಲ್ಲಿ, “ಅಪ್ಪ, ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ. ನೀವು ಕೊಟ್ಟ ಪ್ರೀತಿ ಯಾರಿಂದಲೂ ಸಿಗುವುದಿಲ್ಲ. ನಿಮ್ಮ ಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ. ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ಮನಸ್ಸಿಲ್ಲ. ಹೀಗಾಗಿ ಸಾವೇ ನನ್ನ ಆಯ್ಕೆ,” ಎಂದು ಯುವತಿ ಬರೆದಿರುವುದು ಪತ್ತೆಯಾಗಿದೆ. ಘಟನೆಯ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ