ಸುಳ್ಯ, ಡಿ. 09 : ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು, ಜಿಗಿದ ಸಂದರ್ಭ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ.
ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಮೃತರು ಎಂದು ಗುರುತಿಸಲಾಗಿದೆ. ಮೃತರು ಬಾಡಿಗೆ ರೂಮಿನಲ್ಲಿ ಡಿ. 5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು, ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ಅವರು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

