ಉಜಿರೆ : ಶಾಲಾರಂಭದ ದಿನವೇ ಶಾಲಾ ಬಾಲಕಿ ಆತ್ಮಹತ್ಯೆಗೆ ಶರಣು – ಕಾರಣ ನಿಗೂಢ !

ಉಜಿರೆ, ಜೂ. 01 : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.

ಮೃತ ವಿದ್ಯಾರ್ಥಿನಿ ಉಜಿರೆಯ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಶಾಲೆಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಗಮನಿಸಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ