ಸುಳ್ಯ: ಮಾರಣಾಂತಿಕ ಹಲ್ಲೆ, ಕೊಲೆ ಪ್ರಕರಣ – ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಸುಳ್ಯ, ಜ. 01 : ವ್ಯಕ್ತಿಯೋರ್ವರಿಗೆ ಕಿರುಕುಳ ನೀಡಿ, ಮಾರಣಾಂತಿಕ ಹಲ್ಲೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41), ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ ಯಾನೆ ಮನು (42) ಬಂಧಿತರು ಎಂದು ತಿಳಿದು ಬಂದಿದೆ.

Advertisement

ಆರೋಪಿಗಳಾದ ಮೊಹಮ್ಮದ್ ರಫೀಕ್ ಹಾಗೂ ಮನೋಹರ್ ಕೆ.ಎಸ್ ಯಾನೆ ಮನು ಇಬ್ಬರನ್ನು ಪ್ರಕರಣದ ಮುಂದಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ. ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣದ ದೂರುದಾರರಾದ ಸುಳ್ಯ ಕಸಬ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ, ಅವರ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು, 2025ರ ಅ. 16 ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಕಳುಹಿಸಿರುತ್ತಾರೆ. ಮುಂದುವರಿದಂತೆ 2025ರ ಅ.17 ರಂದು ಪಿರ್ಯಾದುದಾರರ ಗಂಡ ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ದೂರುದಾರರ ಗಂಡ ಅಬ್ದುಲ್ ಜಬ್ಬಾರ್‌ನ ಸಾವಿಗೆ ರಫೀಕ್ ಪಡು ಮತ್ತು ಇತರರು ಕಾರಣರಾಗಿರುತ್ತಾರೆ ಎಂಬುದಾಗಿ ಅ. 18 ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಅವರು ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿರುವುದರಿಂದ ಪ್ರಸ್ತುತ ಈ ಪ್ರಕರಣವನ್ನು ಕಲಂ: 103 ಜೊತೆಗೆ 3(5) ಬಿಎಸ್‌ಎಸ್ ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿರುತ್ತದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.