ನವದೆಹಲಿ : ಕೊಲೆ ಪ್ರಕರಣಗಳಲ್ಲಿ “ಅಪ್ರಾಪ್ತರನ್ನು ವಯಸ್ಕರೆಂದೇ ಪರಿಗಣಿಸಿ” – ಸುಪ್ರೀಂ ಮಹತ್ವದ ತೀರ್ಪು !

ನವದೆಹಲಿ, ಜು. 22 : ಕೊಲೆ ಪ್ರಕರಣಗಳಲ್ಲಿ ಅಪ್ರಾಪ್ತ ವಯಸ್ಕರು ಆರೋಪಿಗಳಾಗಿದ್ದ ಸಂದರ್ಭದಲ್ಲಿ ಆ ಪ್ರಕರಣವು ಘೋರ ಅಪರಾಧ ಎಂದು ಪರಿಗಣಿಸಲ್ಪಟ್ಟಿದ್ದರೆ ಅಂತಹ ಆರೋಪಿಯನ್ನು ಪ್ರಾಪ್ತ ವಯಸ್ಕನೆಂದು ಪರಿಗಣಿಸಿ, ಅದಕ್ಕೆ ಪೂರಕವಾದ ಕಾನೂನು ಕ್ರಮ ಜರುಗಿಸಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.

Advertisement

ಬಿಹಾರದ ಬಾಲಕನೊಬ್ಬನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಅಪ್ರಾಪ್ತನನ್ನು ವಯಸ್ಕನೆಂದು ಪರಿಗಣಿಸುವಂತೆ ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅಲ್ಲದೆ, ಆರೋಪಿಯನ್ನು ವಯಸ್ಕನೆಂದು ಪರಿಗಣಿಸಿದ ಬೆನ್ನಲ್ಲೇ ಆ ಪ್ರಕರಣವನ್ನು ಬಾಲಾಪರಾಧಿ ನ್ಯಾಯ ಮಂಡಳಿಯಿಂದ ಸಾಮಾನ್ಯ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂಬ ಹೈಕೋರ್ಟ್ ತೀರ್ಪನ್ನೂ ಪೀಠ ಸ್ವಾಗತಿಸಿದೆ.

‘ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಬರುವ ಕೊಲೆ ಪ್ರಕರಣವನ್ನು 2015ರ ಬಾಲಾಪರಾಧ ಕಾಯ್ದೆಯಲ್ಲಿ ‘ಘೋರ ಅಪರಾಧ’ವೆಂದು ಪರಿಗಣಿಸಲ್ಪಟ್ಟಿದೆ. ಇಂಥ ಪ್ರಕರಣಗಳಲ್ಲಿನ ಅಂಶಗಳು ಕಾನೂನಿನಲ್ಲಿರುವ ಅಗತ್ಯ ಮಾನದಂಡಗಳನ್ನು ಪೂರೈಸಿದರೆ ಅಂತಹ ಬಾಲಾರೋಪಿಯನ್ನು ವಯಸ್ಕನೆಂದು ಪರಿಗಣಿಸಿ ವಿಚಾರಣೆ ನಡೆಸಲು ಅವಕಾಶವಿದೆ’ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.