ಆನ್ ಲೈನ್ ಗೇಮಿಂಗ್ ಕಾಯ್ದೆ : ಕೇಂದ್ರ ಸರ್ಕಾರಕ್ಕೆ ಸರ್ವೋಚ್ಛ ನ್ಯಾಯಾಲಯ ನೋಟೀಸ್

ನವದೆಹಲಿ : ತಂತ್ರಜ್ಞಾನದ ಯುಗದಲ್ಲಿ ಇಂದಿನ ಯುವ ಸಮೂಹ ಆನ್ ಲೈನ್ ಹಣದ ಆಟಗಳಿಗೆ ಬಲಿಯಾಗುತ್ತಿದೆ. ಆನ್ ಲೈನ್ ಗೇಮಿಂಗ್ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸಮಗ್ರ ಉತ್ತರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆಯನ್ನು ನೀಡಿದೆ. ಆನ್ ಲೈನ್ ಹಣದ ಆಟಗಳನ್ನು ಮತ್ತು ಅವುಗಳಿಗೆ ಸಂಭಂಧಿಸಿದ ಜಾಹೀರಾತುಗಳನ್ನು ನಿಷೇಧಿಸುವ ಆನ್ ಲೈನ್ ಗೇಮಿಂಗ್ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸಮಗ್ರ ಉತ್ತರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆಯನ್ನು ನೀಡಿದೆ.

Advertisement

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ. ಜೆ.ಬಿ. ಪಾರ್ದಿವಾಲಾ ಅವರ ಪೀಠವು, ಕೇಂದ್ರ ಸರ್ಕಾರ ಈಗಾಗಲೇ ಉತ್ತರ ನೀಡಿದೆ. ಆದರೆ, ಈ ಸಂಬಂಧ ಸಮಗ್ರವಾದ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಎಂದು ಪೀಠ ಹೇಳಿದೆ.

ಅರ್ಜಿದಾರರ ಪರ ಹಾಜರಾಗುವ ವಕೀಲರಿಗೆ ಉತ್ತರದ ಪ್ರತಿಯನ್ನು ಮುಂಚಿತವಾಗಿ ಒದಗಿಸುವಂತೆ ತಿಳಿಸಿದ ಪೀಠವು, ಪ್ರತ್ಯುತ್ತರ ಸಲ್ಲಿಸುವುದಿದ್ದರೆ ಆದಷ್ಟು ಶೀಘ್ರವೇ ಸಲ್ಲಿಸಿ ಎಂದು ಅರ್ಜಿದಾರರಿಗೆ ತಿಳಿಸಿದೆ. ಈ ಕುರಿತ ವಿಚಾರಣೆಯನ್ನು ಪೀಠ ನವೆಂಬರ್ 26ಕ್ಕೆ ನಿಗದಿಪಡಿಸಿ ಆದೇಶಿಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.