ಮಂಗಳೂರು : ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಪ್ರಕರಣ – ಕೊಲೆ ಶಂಕೆಯಲ್ಲಿ ಸಹೋದರನ ತೀವ್ರ ವಿಚಾರಣೆ !

Advertisement

ಮಂಗಳೂರು, ಜು. 20 : ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪ ನಡೆದಿದೆ. ಇದೊಂದು ವ್ಯವಸ್ಥಿತ ಕೊಲೆ ಎಂಬ ಶಂಕೆಯಲ್ಲಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಸೇರಿದಂತೆ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement

ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದಿದ್ದ ಅವರು ಚೊಕ್ಕಬೆಟ್ಟು ಮಠದ ಸಮೀಪ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮಲ್ಲಿಕಾರ್ಜುನ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಪ್ರಕರಣವಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನೊಂದಿಗೆ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರ ಅಣ್ಣ ಸೋಮನಾಥ್ (21)ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಸೋಮನಾಥ್ ಪ್ರಮುಖ ಶಂಕಿತನಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಇದೇ ವೇಳೆ, ತನಿಖೆಯ ಭಾಗವಾಗಿ ಪಕ್ಕದ ಮನೆಯ ಮತ್ತೋರ್ವ ಯುವಕನನ್ನೂ ಸುರತ್ಕಲ್ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿಚಾರಣೆ ಬಳಿಕ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ? ಕೊಲೆಯಾಗಿದ್ದರೆ ಕೊಲೆಗೆ ಕಾರಣವೇನು ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ