ಬಂದಾರು : ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನುಮ ದಿನ ಆಚರಣೆ

ಬಂದಾರು, ಜ. 13 : ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನುಮ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡರವರು ಮಾತನಾಡಿ, ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂಬ ಕರೆಯನ್ನು ಸ್ವಾಮಿ ವಿವೇಕಾನಂದರು ನೀಡಿದ್ದಾರೆ. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ ಎಂದರು.

Advertisement

ಕಾರ್ಯಕ್ರಮದಲ್ಲಿ ಕೇಶವ ಜಾಲ್ನಡೆ, ರಮೇಶ್ ನೆಕ್ಕರಜೆ, ಶಿಶು ಮಂದಿರದ ಶಿಕ್ಷಕಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.