ಬೆಳ್ತಂಗಡಿ : ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ

ಪುಂಜಾಲಕಟ್ಟೆ, ಮಾ. 09 : ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ, ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ 42ನೇ ವರ್ಷದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಮಾ 8ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಧಾರ್ಮಿಕ ಪರಿಷತ್ ನ ರವಿಶಂಕರ ಶೆಟ್ಟಿ ಬಡಾಜೆಗುತ್ತು ನೇರವೇರಿಸಿ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪಾಡಿಗುತ್ತು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ದೈಜಿವರ್ಲ್ಡ್ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ, ಉದ್ಯಮಿ ಹರೀಂದ್ರ ಟಿ.ಪೈ, ಮಾಲಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಪುನೀತ್ ಕುಮಾರ್, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಯು.ಎಸ್ ಚಂದ್ರಶೇಖರ ಭಟ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ:

ಪ್ರತಿ ವರ್ಷ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ನೀಡುತ್ತಿರುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಯನ್ನು ಧಾರ್ಮಿಕ ಕ್ಷೇತ್ರದಲ್ಲಿ ರವಿಶಂಕರ ಶೆಟ್ಟಿ ಬಡಾಜೆಗುತ್ತು,ಯಕ್ಷಗಾನ ಕ್ಷೇತ್ರ ದಿವಾಕರ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಸಂತೋಷ್ ಎಸ್ ಸನಿಲ್, ಉದ್ಯಮ ಕ್ಷೇತ್ರದಲ್ಲಿ ಮೊಹಮ್ಮದ್ ರಫೀಕ್, ಸಮಾಜಸೇವೆ ಮತ್ತು ಸಂಘಟನೆಗೆ ಸುಧೀರ್ ಪೂಜಾರಿ ದ.ಕ ಗ್ಯಾರೇಜ್ ಮಾಲಕರ ಸಂಘ ಬಂಟ್ವಾಳ ಇವರಿಗೆ ಪ್ರದಾನ ಮಾಡಲಾಯಿತು.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಸ್ವಾಗತಿಸಿದರು. ಗೌರವಾಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಅಧ್ಯಕ್ಷ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಪಿ. ಪೂಂಜಾಲಕಟ್ಟೆ ಹಾಗೂ ಸದಸ್ಯರು ಸಹಕರಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.