ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ’ರವರ ನಿವಾಸ ಮಿಥಿಲಾಗೆ ಭೇಟಿ ನೀಡಿದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ

ಗರ್ಡಾಡಿ, ಮಾ. 06 : ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು.

Advertisement



ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್ ಪೂಂಜಾ ಹಾಗೂ ಅವರ ಕುಟುಂಬ ಸದಸ್ಯರನ್ನು ಆತ್ಮೀಯವಾಗಿ ಭೇಟಿ ಮಾಡಿ, ಶುಭ ಹಾರೈಕೆಗಳನ್ನು ತಿಳಿಸಿ, ಆಶೀರ್ವದಿಸಿದರು.



ಭೇಟಿಯ ವೇಳೆ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಚರ್ಚೆ ನಡೆಯಿತು. ಮಹಾಸ್ವಾಮಿಗಳ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜಾ ಅವರು ಸಂತೋಷ ವ್ಯಕ್ತಪಡಿಸಿ, ಸಮಾಜದ ಒಳಿತಿಗಾಗಿ ಮಠದ ಮಾರ್ಗದರ್ಶನ ಸದಾ ಪ್ರೇರಣೆಯಾಗಿದೆ ಎಂದು ಹೇಳಿದರು.



ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದು, ಪೂಜ್ಯ ಮಹಾಸ್ವಾಮಿಗಳ ಆಶೀರ್ವಾದವನ್ನು ಪಡೆದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.