ಆತಿಥೇಯ ದೇಶಕ್ಕೆ ಮೊದಲ ಟಿ-20 ವಿಶ್ವಕಪ್ – ಮೂರನೇ ಬಾರಿಗೆ ಟಿ-20 ವಿಶ್ವಕಪ್ ಮುಡಿಗೇರಿಸಿದ ಭಾರತ

TOPSHOT - India's players celebrate with the trophy after winning the 2026 ICC Men's T20 Cricket World Cup final match against New Zealand at the Narendra Modi Stadium in Ahmedabad on March 8, 2026. (Photo by Punit PARANJPE / AFP via Getty Images)
Advertisement

ಅಹ್ಮದಾಬಾದ್, ಮಾ. 09 : 2026 ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಭಾರತವು ಆತಿಥೇಯ ದೇಶವಾಗಿ ವಿಶ್ವಕಪ್ ಗೆದ್ದ ಮೊದಲ ದೇಶವಾಗಿ ಹೊರಹೊಮ್ಮಿದೆ. ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶನ್ ಕಿಶನ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಅಹ್ಮದಾಬಾದ್ ನಲ್ಲಿ ನಡೆದ ವಿಶ್ವಕಪ್ ಟಿ-20 ಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 96 ರನ್ ಗಳ ಗೆಲುವು ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ-20 ವಿಶ್ವಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

Advertisement

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ನ್ಯೂಜಿಲೆಂಡ್ ಬೌಲರ್ ಗಳನ್ನು ಬೆಂಡೆತ್ತಿದರು. ಭಾರತ ಪರ ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶನ್ ಕಿಶನ್ ವೇಗದ ಅರ್ಧಶತಕ ಸಿಡಿಸಿ ಮಿಂಚಿದರು. ಅಂತಿಮ ಹಂತದಲ್ಲಿ ಶಿವಂ ಧುಬೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ, ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 255 ರನ್‌ ಗಳ ಬೃಹತ್ ಮೊತ್ತ ಪೇರಿಸಿತು. ಕಿವೀಸ್ ಪರ ಜಿಮಿ ನೀಶಮ್ ಮೂರು ವಿಕೆಟ್ ಪಡೆದರು. ಇನ್ನು ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ಆರಂಭಿಕ ಹಿನ್ನಡೆ ಹಾಗೂ ಭಾರತದ ಬೌಲರ್ ಗಳ ದಾಳಿಗೆ ತತ್ತರಿಸಿತು.

Advertisement

ಅಂತಿಮವಾಗಿ ನ್ಯೂಜಿಲ್ಯಾಂಡ್ 19 ಓವರ್ ಗಳಲ್ಲಿ 159 ರನ್ ಗಳಿಗೆ ಸರ್ವಪತನ ಕಂಡಿತು. ಭಾರತ ಪರ ಜಸ್ ಪ್ರೀತ್ ಬುಮ್ರಾ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಒಟ್ಟಾರೆಯಾಗಿ ಭಾರತ ಮೂರನೇ ಬಾರಿಗೆ ಟಿ-20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತು. 2007 ಹಾಗೂ 2024 ರಲ್ಲಿ ಪ್ರಶಸ್ತಿ ಮುಡಿಗೇರಿಸಿದ್ದ ಭಾರತ ಇದೀಗ ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ