ಕಡಬ : ತಲೆನೋವಿನ ಔಷಧ ಸೇವಸಿ ಬಾಲಕ ಸಾವು – ಪ್ರಕರಣ ದಾಖಲು

Advertisement

ಕಡಬ, ಮಾ. 19 : ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾರ್ಚ್ 18ರಂದು ಸಂಜೆ, ಬಾಲಕನು ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದಾನೆಂದು ತಾಯಿ ಮಾಹಿತಿ ನೀಡಿದ್ದಾರೆ.

ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಬಾಲಕ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಿಎನ್‌ಎಸ್‌ಎಸ್ 2023ರ ಕಲಂ 194ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಬಾಲಕನ ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ