ಉಜಿರೆ, ಜ. 31 : ದೇವಸ್ಥಾನವೊಂದರ ಕಾಮಗಾರಿ ಸಂದರ್ಭದಲ್ಲಿ ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಬಿಹಾರ ಮೂಲದ ರಾಕೇಶ್ ಕುಮಾರ್(25) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ.
ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತಡೆಗೋಡೆ ಕುಸಿದಿದೆ ಎನ್ನಲಾಗಿದೆ. ಈ ವೇಳೆ ಕಾರ್ಮಿಕ ರಾಕೇಶ್ ಕುಮಾರ್ (25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.
ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

