ತಮಿಳುನಾಡು : ಸೋದರ ಮಾವನ ಜವಾಬ್ದಾರಿ ಹೊತ್ತ ಸರ್ಕಾರ – ಪ್ರತಿಯೊಂದು ನವಜಾತ ಶಿಶುವಿಗೆ 1 ಗ್ರಾಂ ಚಿನ್ನ ! ಷರತ್ತುಗಳೇನು ?

ಚೆನ್ನೈ, ಜೂ. 25 : ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ತಮಿಳುನಾಡಿನ ವಿಜಯ್‌ ಸರ್ಕಾರವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ನವಜಾತ ಶಿಶುವಿಗೆ 1 ಗ್ರಾಂ ಚಿನ್ನದ ಉಂಗುರವನ್ನು ಉಚಿತವಾಗಿ ನೀಡುವ ತೈಮಾಮನ್‌ ತಂಗ ಮೋತಿರಾಂ ತಿಟ್ಟಂ ಎಂಬ ಐತಿಹಾಸಿಕ ಯೋಜನೆಯನ್ನು ಪ್ರಕಟಿಸಿದೆ.

Advertisement

ತಮಿಳುನಾಡಿನಲ್ಲಿ ಶಾಶ್ವತವಾಗಿ ವಾಸಿಸುತ್ತಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲಾ ಮಕ್ಕಳಿಗೆ ಈ ಯೋಜನೆ ಅನ್ವಯಿಸುತ್ತದೆ. ಮುಖ್ಯಮಂತ್ರಿ ವಿಜಯ್ (Vijay) ಅವರ ಜನ್ಮದಿನವಾದ ಜೂನ್ 22 ರಿಂದ ಪೂರ್ವಾನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಜನ್ಮದಿನವಾದ ಸೆಪ್ಟೆಂಬರ್ 15 ರಂದು ಈ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ.

ಪ್ರಸ್ತುತ ಮಾರುಕಟ್ಟೆ ದರದ ಪ್ರಕಾರ ಸುಮಾರು 13,600 ರೂ. ಮೌಲ್ಯದ 1 ಗ್ರಾಂ ಚಿನ್ನದ ಉಂಗುರವನ್ನು ಶಿಶುಗಳಿಗೆ ನೀಡಲಾಗುತ್ತದೆ. ಈ ಯೋಜನೆಗಾಗಿ ಸರ್ಕಾರವು ವಾರ್ಷಿಕವಾಗಿ 755.83 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.

ತಮಿಳುನಾಡಿನಲ್ಲಿ ಮಗು ಜನಿಸಿದಾಗ ಮನೆಗೆ ಬರಮಾಡಿಕೊಳ್ಳಲು ಸೋದರ ಮಾವನ ಕಡೆಯಿಂದ ಚಿನ್ನದ ಉಡುಗೊರೆ ನೀಡುವ (ತೈಮಾಮನ್ ಸೀರ್) ಪದ್ಧತಿ ಇದೆ. ಈಗ ಸರ್ಕಾರವೇ ಸಾಂಕೇತಿಕವಾಗಿ ಆ ಸೋದರ ಮಾವನ ಜವಾಬ್ದಾರಿಯನ್ನು ಹೊತ್ತು, ಪ್ರತಿ ಮಗುವಿಗೆ ಪ್ರೀತಿ ಈ ಚಿನ್ನದ ಉಂಗುರವನ್ನು ನೀಡಲು ಮುಂದಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.