ತಮಿಳುನಾಡು : 14 ವರ್ಷದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ – 43 ವರ್ಷದ ಕಾರು ಚಾಲಕನ ಬಂಧನ !

ತಮಿಳುನಾಡು, ಜೂ. 04 : ಇಲ್ಲಿನ ತಿರುಚಿರಾಪಳ್ಳಿ ಕೀರೈಕಡೈ ಬಜಾರ್‌ನಲ್ಲಿ ಬುಧವಾರ ಸಂಜೆ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು(14 ವರ್ಷ) ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

Advertisement

ಕ್ರಮ ಕೈಗೊಂಡಿರುವ ತಿರುಚಿರಾಪಳ್ಳಿಯ ಪೊಲೀಸರು ಪೋಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ 43 ವರ್ಷದ ಕಾರು ಚಾಲಕ ಶಿವಗಂಗಾದ ಮರಿಸೆಲ್ವನ್ ಎಂಬಾತನನ್ನು ಬಂಧಿಸಿದ್ದಾರೆ.

ತಿರುಚ್ಚಿ ನಗರ ಪೊಲೀಸರ ಪ್ರಕಾರ, ಅಪ್ರಾಪ್ತ ಬಾಲಕಿ ತೀವ್ರ ವೈದ್ಯಕೀಯ ನಿಗಾದಲ್ಲಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಅಥವಾ ಇನ್ನಾವುದೇ ಅಪರಾಧ ನಡೆದಿದೆಯೇ ಎಂದು ನಿರ್ಧರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಘಟನೆ ಬಳಿಕ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ನ್ಯಾಯಕ್ಕಾಗಿ ಒತ್ತಾಯಿಸಿ ರಾತ್ರಿ ಸರಕಾರಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.