ಬೆಳ್ತಂಗಡಿ : ತಂದೆಯನ್ನೇ ಕೊಲೆಗೈಯ್ಯಲು ಯತ್ನಿಸಿದ 25 ವರ್ಷದ ಮಗ – ತಂದೆ ಆಸ್ಪತ್ರೆಗೆ, ಮಗ ಜೈಲಿಗೆ !

ಬೆಳ್ತಂಗಡಿ, ಏ. 21 : ಮಗನೇ ತಂದೆಯನ್ನು ಕೊಲೆಗೈಯ್ಯಲು ಯತ್ನಿಸಿದ ಘಟನೆಯೊಂದು ತಾಲೂಕಿನಲ್ಲಿ ನಡೆದಿದೆ. ಸದ್ಯ, ತಂದೆ ಅಪಾಯದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗನನ್ನು ಪೊಲೀಸರು ಬಂಧಿಸಿ, ಕಾರಾಗೃಹಕ್ಕೆ ತಳ್ಳಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಣಿಕೆ ನಿವಾಸಿ ಗಾರೆಕೆಲಸ ಮಾಡುತ್ತಿರುವ ನಾರಾಯಣ (52) ಮತ್ತು ಟಿಂಬರ್ ಕೆಲಸ ಮಾಡುತ್ತಿದ್ದ ಮಗ ಭರತ್ (25) ಎಂಬಾತ ನಡುವೆ ಮನೆಯಲ್ಲಿರುವಾಗ ಏ.19 ರಂದು ರಾತ್ರಿ ಸುಮಾರು 7:30 ಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ನಡುವೆ ಮನೆಯ ಹೊರಭಾಗದಲ್ಲಿದ್ದ ತಂದೆಗೆ ಕತ್ತಿಯಿಂದ ಕುತ್ತಿಗೆ ಮತ್ತು ಕೈಗೆ ಕಡಿದಿದ್ದಾನೆ. ತಕ್ಷಣ ಹತ್ತಿರದ ಮನೆಯವರು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಏ.19 ರಂದು ಮಧ್ಯರಾತ್ರಿ ಕಲಂ 109,352,351(3) BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪ್ರಭಾರ ಸಬ್ ಇನ್ಸ್‌ಪೆಕ್ಟರ್‌ ಸಿಖಂದ‌ರ್ ಪಾಷ ನೇತೃತ್ವದ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗ ಆರೋಪಿ ಮಗ ಭರತ್(25) ಎಂಬಾತನನ್ನು ಏ.20 ರಂದು ಬೆಳಗ್ಗೆ ಉಜಿರೆಯಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ರಾತ್ರಿ ಬಂಟ್ವಾಳ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಪ್ರಭಾರ ಸಬ್ ಇನ್ಸ್‌ಪೆಕ್ಟ‌ರ್ ಸಿಖಂದರ್ ಪಾಷ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.