ಬ್ರಹ್ಮಾವರ : ಕ್ಷುಲ್ಲಕ ಕಾರಣಕ್ಕೆ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಪಾಪಿ ಮಗ !

Advertisement

ಬ್ರಹ್ಮಾವರ, ಆ. 24 : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ, ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

Advertisement

ಆರೋಪಿಯನ್ನು ಶಾಹಿದ್ ಅಲಿ (31) ಎಂದು ಗುರುತಿಸಲಾಗಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಮೃತ ದಂಪತಿ.

Advertisement

ಶಾಹಿದ್ ಮತ್ತು ಆತನ ಪೋಷಕರ ನಡುವೆ ಸಣ್ಣಪುಟ್ಟ ವಿಷಯಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆತ, ಅವರ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

⚠️ Contents are protected on this website.