ಕಾಸರಗೋಡು : 18 ವರ್ಷದ ಮಗಳನ್ನು ಕಡಿದು ಕೊಲೆಗೈದ ತಂದೆ !

Advertisement

ಕಾಸರಗೋಡು, ಫೆ. 03 : 18 ವರ್ಷದ ತನ್ನ ಮಗಳನ್ನು ತಂದೆಯೇ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

Advertisement

ತೂಮಿನಾಡಿನ ಜುಮೈಲಾ ಕೊಲೆಗೀಡಾದವಳು. ಕೃತ್ಯ ನಡೆಸಿದ ತಂದೆ ಉಮ್ಮರ್ ಫಾರೂಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎನ್ನಲಾಗಿದೆ.

Advertisement

ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದನು. ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ