ಮಣಿಪಾಲ : ‘TATTO-313’ ಗ್ಯಾಂಗ್‌ನ ಇಬ್ಬರು ಆರೋಪಿಗಳ ಬಂಧನ – ‘TATTO-313’ ಗ್ಯಾಂಗ್‌ ಬಗ್ಗೆ ಇರಲಿ ಎಚ್ಚರ !

Advertisement

ಮಣಿಪಾಲ, ಜೂ. 09 : ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಮುಸುಕುಧಾರಿ ‘TATTO-313’ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 7,90,000 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಮಂಚಿಕೋಡಿ ನಿವಾಸಿ ಅಮಿತ್ ಡ್ಯಾನಿಯಲ್ ಅವರ ಮನೆಯಲ್ಲಿ ಫೆಬ್ರವರಿ 3 ಮತ್ತು 4ರ ನಡುವೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳರು ಮನೆಯ ಬಾಗಿಲು ಮುರಿದು ಸುಮಾರು 75 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಜೂನ್ 6ರಂದು ರಾತ್ರಿ ಗಸ್ತಿನಲ್ಲಿದ್ದ ಪಿಎಸ್‌ಐ ಶಂಭುಲಿಂಗಯ್ಯ ಹಾಗೂ ಸಿಬ್ಬಂದಿ ಇಂದ್ರಾಳಿ ರೈಲ್ವೆ ಗೋಡೌನ್ ರಸ್ತೆಯ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

Advertisement

ಬಂಧಿತ ಆರೋಪಿಗಳನ್ನು ಬೆಂಗಳೂರು ಮೂಲದ ದರ್ಶನ್ ಆರ್. (21) ಹಾಗೂ ದಾವಣಗೆರೆ ಮೂಲದ ಚಂದ್ರು (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಶಿವಮೊಗ್ಗದ ಲಾಡ್ಜ್‌ನಲ್ಲಿ ಅಡಗಿಸಿಟ್ಟಿದ್ದ 60ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ತನಿಖೆಯಲ್ಲಿ, ಆರೋಪಿಗಳು ಕೈಗಳ ಮೇಲೆ ‘TATTO 313’ ಎಂಬ ಟ್ಯಾಟೂ ಹಾಕಿಸಿಕೊಂಡು ಗ್ಯಾಂಗ್ ರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆಂಬುದು ತಿಳಿದುಬಂದಿದೆ. ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ರೈಲ್ವೆ ನಿಲ್ದಾಣಗಳ ಸಮೀಪದ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ನಡೆಸುವುದು ಇವರ ಕಾರ್ಯವೈಖರಿಯಾಗಿತ್ತು.

ಆರೋಪಿಗಳ ವಿರುದ್ಧ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಸುರತ್ಕಲ್ ಪ್ರದೇಶದಲ್ಲಿ 2025ರ ಸೆಪ್ಟೆಂಬರ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿಯೂ ಇವರ ಕೈವಾಡ ಇರುವ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳ ಬಂಧನ ಬಾಕಿಯಿದ್ದು, ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ