ಸುಳ್ಯ : ಮೂರು ವರ್ಷದ ತನ್ನ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ತಾಯಿ ಆತ್ಮಹತ್ಯೆ !

Shallow depth of field image taken of yellow law enforcement line with police car and lights in the background.

ಸುಳ್ಯ, ಜ. 05 : ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ನಡೆದಿದೆ.

Advertisement

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು ಎಂದು ಗುರುತಿಸಲಾಗಿದೆ. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ ಇದ್ದ ಸಂದರ್ಭ ಹುಡುಕಾಡಿದಾಗ ಮನೆ ಸಮೀಪದ, ಬೇರೆಯವರ ಜಾಗದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಧುಶ್ರೀ ಅವರು ಮಗುವನ್ನು ಬಟ್ಟೆಯಲ್ಲಿ ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಪುತ್ತೂರು ಬೆಟಗೇರಿಯವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.