ಮಹಾರಾಷ್ಟ್ರ : ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಬಲವಂತದ ಮತಾಂತರ – ಪ್ರಮುಖ ಆರೋಪಿ ನಿದಾ ಖಾನ್ ಬಂಧನ

Advertisement

ಮಹಾರಾಷ್ಟ್ರ, ಮೇ. 08 : ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಟಿಸಿಎಸ್ ಕಚೇರಿಯಲ್ಲಿ ನಡೆದ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಳನ್ನು ಗುರುವಾರ (ಮೇ 08) ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

Advertisement

ಟಿಸಿಎಸ್ ನಲ್ಲಿ ನಡೆದ ಮತಾಂತರ ಆರೋಪದ ಕುರಿತು ನಿದಾ ಖಾನ್ ವಿರುದ್ಧ ಹಲವಾರು ದೂರುಗಳು ದಾಖಲಾದ ನಂತರ ಆಕೆ ನಾಪತ್ತೆಯಾಗಿದ್ದಳು. ಅಲ್ಲದೇ ಎಫ್ ಐಆರ್‌ದ ದಾಖಲಾದ ನಂತರ ಬಂಧನದಿಂದ ಬಚಾವ್ ಆಗಲು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.

Advertisement

ಪೊಲೀಸರ ಪ್ರಕಾರ, ಖಾನ್ ಕಳೆದ ನಾಲ್ಕು ದಿನಗಳಿಂದ ಛತ್ರಪತಿ ಸಂಭಾಜಿನಗರದ ನರೇಗಾಂವ್ ಪ್ರದೇಶದ ಕೈಸರ್ ಕಾಲೋನಿಯಲ್ಲಿರುವ ಫ್ಲಾಟ್‌ನಲ್ಲಿ ತನ್ನ ಪೋಷಕರು, ಸಹೋದರ ಮತ್ತು ಚಿಕ್ಕಮ್ಮನೊಂದಿಗೆ ವಾಸಿಸುತ್ತಿದ್ದಳು. ಈಕೆಯನ್ನು ಬಂಧಿಸುವ ಎರಡು ದಿನಗಳ ಮೊದಲು ಫ್ಲ್ಯಾಟ್ ಮೇಲೆ ತೀವ್ರ ನಿಗಾ ಇರಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಸಿಕ್ ಎಸ್ ಐಟಿ ಹಾಗೂ ಛತ್ರಪತಿ ಸಂಭಾಜಿನಗರ್ ಪೊಲೀಸ್ ಕಮಿಷನರೇಟ್, ಕ್ರೈಮ್ ಬ್ರಾಂಚ್ ಜಂಟಿ ಕಾರ್ಯಾಚರಣೆಯ ಮೂಲಕ ನಿದಾಳನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ. “ದೇವಲಾಲಿ ಕ್ಯಾಂಪ್ ಪೊಲೀಸ್ ಠಾಣೆ ಅಪರಾಧ ನೋಂದಣಿ ಸಂಖ್ಯೆ 156/26ರಲ್ಲಿ ಬೇಕಾಗಿದ್ದ ಆರೋಪಿ ನಿದಾ ಖಾನ್ ಳನ್ನು ಛತ್ರಪತಿ ಸಂಭಾಜಿನಗರದಲ್ಲಿ ವಶಕ್ಕೆ ಪಡೆಯಲಾಗಿದೆ” ಎಂದು ಎಸ್‌ಐಟಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 43(5) ಅನ್ವಯ ನಿದಾ ಖಾನ್ ಳನ್ನು ಛತ್ರಪತಿ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು.

ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಫಸ್ಟ್ ಕ್ಲಾಸ್ ಜಡ್ಜ್ ನಿವಾಸದಲ್ಲಿ ಖಾನ್ ಳನ್ನು ಹಾಜರುಪಡಿಸಿ, ಟ್ರಾನ್ಸಿಟ್ ರಿಮಾಂಡ್ ಮೂಲಕ ವಶಕ್ಕೆ ಪಡೆದು ನಾಸಿಕ್ ಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ