ಪುಂಜಾಲಕಟ್ಟೆ : ಪಾದಚಾರಿಗೆ ಟೆಂಪೊ ಡಿಕ್ಕಿ – ಚಿಕಿತ್ಸೆ ಫಲಿಸದೆ ಯುವಕ ಸಾವು

Advertisement

ಪುಂಜಾಲಕಟ್ಟೆ, ಆ. 28 : ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಲೆಯ ಭಾಗಕ್ಕೆ ಹಾಗೂ ಎದೆಗೆ ತೀವ್ರ ಏಟಾಗಿದ್ದ ಪರಿಣಾಮ 8 ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ, ಓರ್ವ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ