ಉಡುಪಿ : ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ – ಮಹಿಳಾ ಕಾರ್ಮಿಕೆ ಸಾವು, ಹಲವರಿಗೆ ಗಾಯ

ಉಡುಪಿ, ಡಿ. 12 : ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿಯಾಗಿ ಮಹಿಳಾ ಕಾರ್ಮಿಕರೊಬ್ಬರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಾರ್ಮಿಕರು ಮತ್ತು ಕಾಂಕ್ರೀಟ್ ಉಪಕರಣಗಳನ್ನು ಸಾಗಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದೆನ್ನಲಾಗಿದೆ.

Advertisement

ಮೃತರನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸಾವಿತ್ರಮ್ಮ, ಮಹಾಂತೇಶ್ ಮತ್ತು ಇತರ ಐದು ಮಂದಿ ಗಾಯಗೊಂಡಿದ್ದಾರೆ. ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋ ವಾಹನದಲ್ಲಿ ಪುರುಷರು ಮತ್ತು ಮಹಿಳ ಕಾರ್ಮಿಕರು, ಕಾಂಕ್ರೀಟ್ ಮಿಶ್ರಣ ಯಂತ್ರ ಮತ್ತು ಇತರ ಸಾಮಗ್ರಿಗಳು ಇದ್ದವು. ವಾಹನವು ಅತಿ ವೇಗವಾಗಿ ಚಲಿಸುತ್ತಿದ್ದಾಗ, ಅದರ ಒಂದು ಟೈರ್ ಇದ್ದಕ್ಕಿದ್ದಂತೆ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾದ ಟೆಂಪೋ ಅಡಿಯಲ್ಲಿ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದರು ತಕ್ಷಣವೇ ಸ್ಥಳೀಯರು ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಓರ್ವ ಮಹಿಳೆ ಯಂತ್ರದ ಕೆಳಗೆ ಸಿಲುಕಿಕೊಂಡಿದ್ದರಿಂದ, ಸಾರ್ವಜನಿಕರು ಮತ್ತು ಟೋಲ್ ಸಿಬ್ಬಂದಿ ಆಕೆಯನ್ನು ಹೊರ ತೆಗೆಯಲು ತೀವ್ರ ಪ್ರಯತ್ನ ನಡೆಸಿದರು. ಬಳಿಕ ಹೆಜಮಾಡಿ ಕ್ರೇನ್ ಮೂಲಕ ಮಹಿಳೆಯನ್ನು ರಕ್ಷಿಸಲಾಯಿತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಟೋಲ್ ಆಂಬ್ಯುಲೆನ್ಸ್ ಮೂಲಕ ಮುಕ್ಕಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆನ್ನಲಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.