ಕಾಪು : ಗೂಡ್ಸ್ ಟೆಂಪೋವೊಂದು ಪಲ್ಟಿಯಾಗಿ, ಟೆಂಪೋದಲ್ಲಿದ್ದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನ. 30ರಂದು ನಡೆದಿದೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ.
ಇದರಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

