ಸೆ. 8ರಂದು ಕ್ರೈಸ್ತರ ತೆನೆ ಹಬ್ಬ – ಕರಾವಳಿ ಜಿಲ್ಲೆಗಳಿಗೆ ಸಾರ್ವತ್ರಿಕ ರಜೆ ನೀಡಲು ಮುಖ್ಯಮಂತ್ರಿಗೆ ಮನವಿ

Advertisement

ಮಂಗಳೂರು, ಆ. 26 : ರಾಜ್ಯದ ಕರಾವಳಿ ಹಾಗೂ ಇಡೀ ರಾಜ್ಯದ ಕ್ಯಾಥೊಲಿಕ್ ಕ್ರೈಸ್ತ ಬಾಂಧವರು ಪ್ರತಿ ವರ್ಷ ಸಪ್ಟೆಂಬರ್ 8 ರಂದು ವಿಶೇಷ ಕುಟುಂಬ ಹಬ್ಬದ ದಿನವನ್ನಾಗಿ ಅನಾದಿಕಾಲದಿಂದಲೂ ಆಚರಿಸುತ್ತಾ ಬರುತ್ತಿದ್ದು, ಹಾಗಾಗಿ ಸಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಿಗೆ ಸಾರ್ವತ್ರಿಕ ರಜೆ ಘೋಷಿಸ ಬೇಕೆಂದು ಕಥೊಲಿಕ್ ಸಭಾ ಮಂಗಳೂರು ಮತ್ತು ಉಡುಪಿ ಘಟಕಗಳ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ.

Advertisement

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಘಟಕದ ರಾಜಕೀಯ ಸಂಚಾಲಕ ಹಾಗೂ ಮಾಜಿ ಅಧ್ಯಕ್ಷ ಸ್ಪ್ಯಾನಿ ಲೋಬೊ, ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ಮೆಲ್ವಿನ್ ಆರಾನ್ಹಾ, ಉಡುಪಿ ವಲಯ ಅಧ್ಯಕ್ಷ ಕಿರಣ್ ಲೂವಿಸ್ ಅವರನ್ನು ಒಳಗೊಂಡ ನಿಯೋಗವು ಮುಖ್ಯಮಂತ್ರಿವರನ್ನು ಭೇಟಿಯಾಗಿ ಈ ಮನವಿ ಸಲ್ಲಿಸಿದೆ.

Advertisement

ಸಪ್ಟೆಂಬರ್ 8 ರಂದು ದೇವಮಾತೆ ಕನ್ಯಾಮರಿಯಮ್ಮನವರ ಜನ್ಮ ದಿನವಾಗಿದ್ದು, ಅದೇ ದಿನ ಕರಾವಳಿ ಹಾಗೂ ಇಡೀ ರಾಜ್ಯದ ಕ್ರೈಸ್ತ ಬಾಂಧವರು ತೆನೆ ಹಬ್ಬವನ್ನಾಗಿ ಆಚರಿಸುತ್ತಾರೆ. ಈ ದಿನದಂದು ರೈತರು ಬೆಳೆದ ಹೊಸ ಫಸಲನ್ನು ದೇವರಿಗೆ ಅರ್ಪಿಸಿ, ಚರ್ಚ್ ಗಳಲ್ಲಿ ಪೂಜಾವಿಧಿಗಳನ್ನು ನೆರವೇರಿಸಿ ಕುಟುಂಬದ ಸಹಭೋಜನದೊಂದಿಗೆ ಸಂಭ್ರಮಾಚರಣೆ ನಡೆಸುತ್ತಾರೆ.ರಾಜ್ಯಾದ್ಯಂತ ಕ್ರೈಸ್ತ ಬಾಂಧವರು ಸಪ್ಟೆಂಬರ್ 8 ರಂದು ಆಚರಿಸುವ ಮರಿಯ ಜಯಂತಿ/ತೆನೆ ಹಬ್ಬಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವತ್ರಿಕ ರಜಾ ನೀಡ ಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ವಿನಂತಿಸಲಾಗಿದೆ.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಪ್ಟೆಂಬರ್ 8 ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವತ್ರಿಕ ರಜಾ ನೀಡುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಕ್ಯಾಥೊಲಿಕ್ ಸಭಾ ಪದಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ