ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಮಾಡಿದೆ.

Advertisement

ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು. ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶ ರದ್ದುಪಡಿಸಿ‌ಆದೇಶ ನೀಡಿದೆ. ಅಲ್ಲದೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆಯೂ ಎರಡನೇ ಪ್ರತಿವಾದಿಯಾದ ಪುತ್ತೂರು ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದೆ ಎಂದು ಮಾಹಿತಿ ಲಭ್ಯವಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.