ಮಂಗಳೂರು : ರೌಡಿಶೀಟ‌ರ್ ಟಾಬ್ಲೆಟ್ ಆರಿಫ್’ನನ್ನು ತೊಕ್ಕೊಟ್ಟು ಫ್ಲೈಓವ‌ರ್ ಮೇಲೆಯೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Advertisement

ಮಂಗಳೂರು, ಮಾ.27 : ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟ‌ರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

Advertisement

ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ.

Advertisement

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್‌ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ