ನವದೆಹಲಿ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣ – ಟಿಎಂಸಿ ಮಾಜಿ ಶಾಸಕನ ಬಂಧನ !

Advertisement

ನವದೆಹಲಿ, ಆ. 13 : 2024ರಲ್ಲಿ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ವೈದ್ಯೆಯ ” ಅಂತ್ಯಕ್ರಿಯೆ”ಯನ್ನು ತ್ವರಿತವಾಗಿ ಮಾಡಲು ಒತ್ತಡ ಹೇರಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕ ನಿರ್ಮಲ್ ಘೋಷ್ ಅವರನ್ನು ಒಡಿಶಾದಲ್ಲಿ ಗುರುವಾರ(ಆ.13) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಘೋಷ್ ಪಶ್ಚಿಮಬಂಗಾಳದ ಪಾನಿಹತಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ, ಆರ್ ಜಿಕರ್ ವೈದ್ಯೆಯ ಅಂತ್ಯಕ್ರಿಯೆಯನ್ನು ತರಾತುರಿಯಲ್ಲಿ ನಡೆಸಲು ಒತ್ತಡ ಹೇರಿದ್ದು, ಸಾಕ್ಷ್ಯನಾಶ, ಕ್ರಿಮಿನಲ್ ಸಂಚು ಆರೋಪದಡಿ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. “ತಮ್ಮ ಮಗಳ ಶವವನ್ನು ಆತುರದಲ್ಲೇ ಅಂತ್ಯಸಂಸ್ಕಾರ ನಡೆಸಿದ ಘಟನೆಯ ಮೂವರು ವ್ಯಕ್ತಿಗಳಲ್ಲಿ ಘೋಷ್ ಕೂಡಾ ಒಬ್ಬರಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕೆಂದು ಕೋರಿ ಸಂತ್ರಸ್ತೆಯ ತಂದೆ ಸೋಮವಾರ ಖರಾಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರ್ ಜಿ ಕರ್ ವೈದ್ಯೆಯ ಧಾವಂತದ ಶವಸಂಸ್ಕಾರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಆರ್ ಜಿ ಕರ್ ವೈದ್ಯೆಯ ಅತ್ಯಾಚಾರ ಪ್ರಕರಣ :

2024ರ ಆಗಸ್ಟ್ 9ರಂದು 31 ವರ್ಷದ ಟ್ರೈನಿ ವೈದ್ಯೆಯನ್ನು ಆರ್ ಜಿ ಕರ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ತನಿಖೆಯ ನಂತರ ಇದೊಂದು ಅತ್ಯಾಚಾರ ಮತ್ತು ಕೊಲೆ ಪ್ರಕರಣ ಎಂಬುದು ಸಾಬೀತಾಗಿತ್ತು. ಆದರೆ ಈ ಸಂದರ್ಭದಲ್ಲಿ ಸಾಕ್ಷ್ಯನಾಶದ ಉದ್ದೇಶದಿಂದ ಎರಡು ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಬಾಕಿ ಇರುವಾಗಲೇ, ಸಂತ್ರಸ್ತೆಯ ಶವ ಸಂಸ್ಕಾರ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿತ್ತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ