ಮೂಡುಬಿದಿರೆ : ಎಂಡಿಎಂಎ ಸಾಗಾಟಕ್ಕೆ ಯತ್ನ ಸಿನಿಮೀಯ ಶೈಲಿಯಲ್ಲಿ ಆರೋಪಿ ತೌಸಿಫ್ ನನ್ನು ಬಂಧಿಸಿದ ಪೊಲೀಸರು

ಮೂಡುಬಿದಿರೆ, ಡಿ. 17 : ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ಓರ್ವನನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಕೊಡಂಗಲ್ಲು ಎಂಬಲ್ಲಿ ನಡೆದಿದೆ.

Advertisement

ಕಲ್ಲಡ್ಕ ನಿವಾಸಿ ತೌಸೀಫ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 50ಸಾವಿರ ರೂ. ಮೌಲ್ಯದ 10.800 ಗ್ರಾಂ ತೂಕದ ಎಂಡಿಎಂಎ, ಕೃತ್ಯಕ್ಕೆ ಬಳಸಿದ್ದ ಸುಮಾರು 3ಲಕ್ಷ‌ ರೂ.‌ಮೌಲ್ಯದ ಕಾರು, ಈತನ ಕಾರಿನಲ್ಲಿ ಪತ್ತೆಯಾಗಿದ್ದ ತಲವಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೂಡುಬಿದಿರೆ ತಾಲೂಕಿನ ಶಿರ್ತಾಡಿಯಿಂದ ಕೊಡಂಗಲ್ಲು – ಮಹಾವೀರ ಕಾಲೇಜು ಮಾರ್ಗವಾಗಿ ಮಂಗಳೂರಿಗೆ ಎಂಡಿಎಂಎ ಸಹಿತ ಕಾರಿನಲ್ಲಿ ತೆರಳುತ್ತಿರುವ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರಿಗೆ ಮಾಹಿತಿ ದೊರೆತ ಹಿನ್ನಲೆ ಆತನ ಕಾರು ನಿಲ್ಲಿಸಿ ಬಂಧಿಸಲು ಹೋಗಿದ್ದ ಸಂದರ್ಭ ಆರೋಪಿಯು ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಪೊಲೀಸರು ಸರಕಾರಿ ವಾಹನದಲ್ಲಿ ಬೆನ್ನತ್ತಿ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ತಡೆದು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 5 ಪ್ರಕರಣಗಳು ದಾಖಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯ ವಿರುದ್ಧ ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.