ಥೈಲ್ಯಾಂಡ್‌ : ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಕ್ರೇನ್‌ – 22 ಮಂದಿ ಸಾವು

ಬ್ಯಾಂಕಾಕ್‌, ಜ. 14 : ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಬಿದ್ದು ಹಳಿ ತಪ್ಪಿದ ಪರಿಣಾಮ ಕನಿಷ್ಠ 22 ಜನ ಮೃತಪಟ್ಟ ಘಟನೆ ಥೈಲ್ಯಾಂಡ್‌ನ ಈಶಾನ್ಯ ಪ್ರಾಂತ್ಯದಲ್ಲಿ ನಡೆದಿದೆ.

ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ 230 ಕಿಮೀ (143 ಮೈಲುಗಳು) ದೂರದಲ್ಲಿರುವ ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೊ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ.ರೈಲು ಉಬೊನ್ ರಾಟ್ಚತಾನಿ ಪ್ರಾಂತ್ಯಕ್ಕೆ ಹೋಗುತ್ತಿತ್ತು. ಈ ವೇಳೆ ಹೈಸ್ಪೀಡ್ ರೈಲು ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕ್ರೇನ್‌ ಕುಸಿದು ಒಂದು ಬೋಗಿಯ ಮೇಲೆ ಬಿದ್ದಿದೆ.

ಕ್ರೇನ್‌ ಬೋಗಿಯ ಮೇಲೆ ಬಿದ್ದ ಕೂಡಲೇ ರೈಲು ಹಳಿ ತಪ್ಪಿದೆ. ರೈಲಿನಲ್ಲಿ ಸುಮಾರು 195 ಜನ ಪ್ರಯಾಣಿಸುತ್ತಿದ್ದರು. ಅಪಘಾತದ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.