ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ

Advertisement

ಬಂಟ್ವಾಳ, ಜೂ. 03 : ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಗಲಾಟೆ ಸೃಷ್ಟಿಸಿ, ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ.

Advertisement

ವರದಿಗಳ ಪ್ರಕಾರ, ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು ಬೋಗಿಯೊಳಗೆ ತೀವ್ರ ಗದ್ದಲ ಎಬ್ಬಿಸುತ್ತಿದ್ದರು ಎಂದು ರೈಲ್ವೆ ಪೊಲೀಸರಿಗೆ ದೂರು ನೀಡಲಾಗಿತ್ತು.

Advertisement

ರೈಲು ಬಂಟ್ವಾಳ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ಜಾಗೃತರಾದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ, ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರೈಲನ್ನು ಬಂಟ್ವಾಳ ನಿಲ್ದಾಣದಲ್ಲಿ ಕೆಲವು ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ