ಚಾರ್ಮಾಡಿ : ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿ – 9 ಮಂದಿ ಗಂಭೀರ, ಓರ್ವ ಸಾವು

ಬೆಳ್ತಂಗಡಿ, ಮಾ. 21 : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ.

ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು, ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.