ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಮಂಗಳೂರು, ಸೆ. 18 : ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಸಂಪುಟದಲ್ಲಿ ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

”ಹಿಂದಿನ ಸರಕಾರಗಳು ಯಾಕೆ ಮಾಡಲಿಲ್ಲ ಅಂತ ನಾನು ಪ್ರಶ್ನೆ ಮಾಡುವುದಿಲ್ಲ. ನಮಗೆ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ. ನಾವು ಬದುಕಿನ ಮೇಲೆ ಮಾಡುತ್ತೇವೆ” ಎಂದು ಸಿಎಂ ತಿಳಿಸಿದರು.

ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ದಕ್ಷಿಣ ಕನ್ನಡ ಮತ್ತು, ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ತುಳು ಮಾತೃಭಾಷಿಗರಾಗಿದ್ದಾರೆ. ಈ ಮೂಲಕ ಸರಕಾರ ಭಾವನಾತ್ಮಕ ವಿಚಾರಕ್ಕೂ ಮನ್ನಣೆ ನೀಡಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !