ತುಮಕೂರಿನಲ್ಲಿ ಶಂಕಿತ ಉಗ್ರರು ವಶಕ್ಕೆ : ದೇಶದಲ್ಲಿ ದುಷ್ಕೃತ್ಯಕ್ಕೆ ಪ್ಲ್ಯಾನ್ – ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು !

ತುಮಕೂರು, ಜೂ. 08 : ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಭಯಾನಕ ಸಂಚು ಹೂಡಿದ್ದು ವಿಚಾರಣೆ ವೇಳೆ ಬಯಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಯುವಕರನ್ನು ಸಂಪರ್ಕಿಸಿ, ಬ್ರೈನ್‌ವಾಶ್ ಮಾಡಿ ದೇಶದಲ್ಲಿ ದುಷ್ಕೃತ್ಯಕ್ಕೆ ಪಾಕ್ ಉಗ್ರ ರಾಣಾ ಸಂಚು ರೂಪಿಸಿದ್ದ ಎಂಬುದು ಕಹಾನಿ ತನಿಖೆಯ ವೇಳೆ ಹೊರಬಂದಿದೆ.

Advertisement

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್ ಮೂಲಕ ಯುವಕರಿಗೆ ಪರಿಚಯವಾಗಿದ್ದ ಪಾಕಿಸ್ತಾನದ ರಾಣಾ ಎಂಬಾತ, ಆರಂಭದಲ್ಲಿ ಧರ್ಮದ ಆಚರಣೆ ಹಾಗೂ ಧರ್ಮಗುರುಗಳ ಪ್ರವಚನಗಳನ್ನು ಹಂಚಿಕೊಳ್ಳುತ್ತಿದ್ದನು. ಆ ನಂತರ ಧರ್ಮಕ್ಕಾಗಿ ಕೆಲಸ ಮಾಡಬೇಕು ಎಂದು ಬಂಧಿತ ಅಲ್ಲಾಬಕ್ಷು ತಲೆಯಲ್ಲಿ ವಿಷ ತುಂಬಿ ಬ್ರೈನ್‌ವಾಶ್ ಮಾಡಿದ್ದ ಎನ್ನಲಾಗಿದೆ. ಅಲ್ಲಾಬಕ್ಷು ಮೊಬೈಲ್‌ನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ನಂಬರ್ ಪತ್ತೆಯಾಗಿದ್ದು, ಅದನ್ನು ‘Rana bhi bhi’ ಎಂದು ಆತ ಸೇವ್ ಮಾಡಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.

ಆರೋಪಿಗಳ ಚಾಟ್ ಬಯಲು

ಪಾಕ್ ಉಗ್ರ ರಾಣಾ ಸಂಪರ್ಕಕ್ಕೆ ಸಿಕ್ಕ ಬಳಿಕ ಅಲ್ಲಾಬಕ್ಷು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದಿ ಭಾಷೆಯಲ್ಲಿ ನಡೆಸಿದ ಚರ್ಚೆಯ ಇನ್‌ಸೈಡ್ ಮಾಹಿತಿ ಲಭ್ಯವಾಗಿದೆ. ರಾಣಾ ಪ್ರಚೋದನೆಗೆ ಮಾರುಹೋಗಿದ್ದ ಅಲ್ಲಾಬಕ್ಷು ಆತನಿಗೆ, “ಇನ್ಷಾ ಅಲ್ಲಾ, ಯಾವುದೇ ಕೆಲಸ ಇರಲಿ, ಯಾವುದೇ ರೀತಿಯ ಕೆಲಸ ಇರಲಿ, ನಿನ್ನ ತಮ್ಮನನ್ನು ನೆನಪಿಸಿಕೊ. ನಾನು ಖಂಡಿತವಾಗಲೂ ಮಾಡುತ್ತೇನೆ” ಎಂದು ಭರವಸೆ ನೀಡಿದ್ದನು. ಅಷ್ಟೇ ಅಲ್ಲದೆ, “ಇನ್ಷಾ ಅಲ್ಲಾ ಈಗ ನಾವಿಬ್ಬರು ಜೊತೆಯಾಗಿದ್ದೇವೆ. ನಮ್ಮ ಕೋಮಿಗೋಸ್ಕರ ಜೊತೆಯಾಗಿ ಕೆಲಸ ಮಾಡೋಣ” ಎಂದು ಹೇಳಿರುವುದು ಪತ್ತೆಯಾಗಿದೆ.

50 ರಿಂದ 60 ಮಂದಿಯನ್ನು ತಯಾರು ಮಾಡು ಎಂದಿದ್ದ ರಾಣಾ

“ದೇವರ ಕೆಲಸ ನಾವೆಲ್ಲಾ ಒಟ್ಟಾಗಿ ಮಾಡೋಣ” ಎಂದು ಹೇಳುತ್ತಿದ್ದ ರಾಣಾ, ಅಲ್ಲಾಬಕ್ಷುಗೆ ದ್ವೇಷದ ತರಬೇತಿ ನೀಡಿದ್ದ. “ನಮ್ಮ ಧರ್ಮದವರನ್ನು ದ್ವೇಷಿಸುವವರನ್ನು ಹಂತ ಹಂತವಾಗಿ ನಾಶ ಮಾಡಬೇಕು. ಅದಕ್ಕಾಗಿ 50 ರಿಂದ 60 ಮಂದಿಯನ್ನು ತಯಾರು ಮಾಡು. ನಾನು ಹೇಳಿದ ಹಾಗೆ ಅವರಿಗೆ ತರಬೇತಿ ನೀಡು, ನಿನಗೆ ಎಷ್ಟು ಹಣ ಬೇಕೋ ಅಷ್ಟು ನಾನು ಕೊಡುತ್ತೇನೆ” ಎಂದು ಆಮಿಷ ಒಡ್ಡಿದ್ದ.

ಇದೇ ವೇಳೆ ಅಲ್ಲಾಬಕ್ಷು, “ನೀನು ಭಾರತದಲ್ಲಿ ಬೇರೆ ಯಾರನ್ನಾದರೂ ಸಂಪರ್ಕಿಸಿದ್ದೀಯಾ?” ಎಂದು ಪ್ರಶ್ನಿಸಿದಾಗ, ರಾಣಾನೇ ಆತನಿಗೆ ಜಮೀರ್ ಖಾನ್ ಎಂಬ ಮತ್ತೊಬ್ಬನನ್ನು ಪರಿಚಯಿಸಿದ್ದ. ಈ ಇಬ್ಬರು ಜೊತೆಯಾಗಿ ದೇಶ ವಿರೋಧಿ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಗೆ ಮಹತ್ವದ ಸುಳಿವು ಲಭ್ಯವಾಗಿದೆ.

ಕೂಡಲೇ ಅಲರ್ಟ್ ಆದ ಗುಪ್ತಚರ ಇಲಾಖೆ ನೀಡಿದ ನಿಖರ ಮಾಹಿತಿ ಆಧರಿಸಿ ತುಮಕೂರು ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಖಾಕಿ ಪಡೆ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಭಯೋತ್ಪಾದನಾ ಸಂಚಿನ ಮತ್ತಷ್ಟು ಆಳವಾದ ಸಂಗತಿಗಳನ್ನು ಕೆದಕುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.