ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೋಡಿ ಮಾಡುತ್ತಾ ದಳಪತಿಯ “ಬಿಗಿಲ್” …!

ಚೆನ್ನೈ, ಜ. 22 : ಚುನಾವಣಾ ಆಯೋಗವು ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(TVK) ಪಕ್ಷಕ್ಕೆ “ವಿಸಿಲ್” ಚಿಹ್ನೆಯನ್ನು ಮಂಜೂರು ಮಾಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಾಮಾನ್ಯ ಚಿಹ್ನೆಯಾಗಿ ವಿಸಿಲ್ ಚಿಹ್ನೆಯನ್ನು ಹಂಚಿಕೆ ಮಾಡಿ ಚುನಾವಣಾ ಸಂಸ್ಥೆ ಅಧಿಕೃತ ಆದೇಶ ಹೊರಡಿಸಿದೆ.

Advertisement

ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಯನ್ನು ಆಧರಿಸಿದ ಪ್ರಣಾಳಿಕೆಯನ್ನು ರೂಪಿಸಲು ಟಿವಿಕೆ ಮಂಗಳವಾರ ಚೆನ್ನೈನಲ್ಲಿ ತನ್ನ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆಯನ್ನು ಕರೆದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಆಯೋಗವು ಚಿಹ್ನೆ ನೀಡಿದ ಬಳಿಕ ಸಾಮಾಜಿಕ ತಾಣದಲ್ಲಿ ಟ್ರೆಂಡಿಗ್ ಆಗುತ್ತಿದೆ. ವಿಜಯ್ ಅವರ ಸೂಪರ್ ಹಿಟ್ ಚಿತ್ರ ಬಿಗಿಲ್ ನ ಫೋಟೋಗಳನ್ನೂ ವೈರಲ್ ಮಾಡಲಾಗುತ್ತಿದೆ. ತಮಿಳುನಾಡಿನಲ್ಲಿ ವಿಜಯ್ ಅವರು ನಡೆಸಿದಂತಹ ಸಭೆಗಳಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದು, ಮುಂದಿನ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಪಕ್ಷವು ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆಯೇ ? ಎಂಬುದನ್ನು ಕಾದು ನೋಡಬೇಕಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.